ಉಡುಪಿ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಮುಂದುವರೆದಿದೆ.
ಉಡುಪಿ ಜಿಲ್ಲೆಯ ಬೈಲಕೆರೆ ವಾರ್ಡ್ ನಲ್ಲಿ 7 ಜನ ಕಾರ್ಯಕರ್ತರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ. ಈ ಮೂಲಕ ಪ್ರವೀಣ್ ನೆಟ್ಟಾರು ಹತ್ಯೆಗೆ ಹಾಗೂ ಹಿಂದೂ ಯುವಕರ ಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ನ್ಯಾಯ ಸಿಗುವವರೆಗೂ ಸರ್ಕಾರದ ವಿರುದ್ಧ ಆಕ್ರೋಶ ಮುಂದುವರೆಯಲಿದೆ ಎಂದು ಕಾರ್ಯಕರ್ತರು ಕಿಡಿ ಕಾರಿದ್ದಾರೆ.
ಧಾರವಾಡ ಜಿಲ್ಲೆಯ ಗ್ರಾಮೀಣ ಕ್ಷೇತ್ರದ 15 ಜನ ಕಾರ್ಯಕರ್ತರು ರಾಜೀನಾಮೆ ನೀಡಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯ ಯಾವುದೆ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಸಿದ್ದಾರೆ.
ಕೊಪ್ಪಳದಲ್ಲಿ ಬಿಜೆಪಿ ಘಟಕದ ಅಧ್ಯಕ್ಷ, ಕಾರ್ಯಾಧ್ಯಕ್ಷರು, ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದರೆ, ಇತ್ತ ಚಿಕ್ಕಮಗಳೂರಿನ ಶೃಂಗೇರಿ ತಾಲೂಕು ಬಿಜೆಪಿ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಸದಸ್ಯರು ರಾಜೀನಾಮೆ ನೀಡಿದ್ದಾರೆ.
ದಾವಣಗೆರೆ, ಶಿವಮೊಗ್ಗ, ಮೈಸೂರು, ಕಾರವಾರ, ಗದಗ, ಚಿತ್ರದುರ್ಗ ಜಿಲ್ಲೆಯಲ್ಲಿಯೂ ಯುವಮೋರ್ಚಾ ಅಧ್ಯಕ್ಷ, ಉಪಾಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ ಪಕ್ಷದ ವಿರುದ್ಧ ತಿರುಗಿಬಿದ್ದಿದ್ದಾರೆ.