ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಮತ್ತೆ ಕಿಡಿಕಾರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಎಲ್. ಸಂತೋಷ್ ಪಕ್ಷವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳಲು ಪ್ರಯತ್ನ ಮಾಡಿದ್ದಲ್ಲದೇ ನನ್ನನ್ನು ಟಾರ್ಗೆಟ್ ಮಾಡಿದ್ದರು ಎಂದು ಆರೋಪಿಸಿದ್ದಾರೆ.
ನಮ್ಮ ಕಡೆ ಬಂದವರನ್ನು ಶೆಟ್ಟರ್ ಸೋಲಿಸಿ ಎಂದು ಪ್ರಚಾರ ಮಾಡಿದರು. ನನ್ನನ್ನು ಟಾರ್ಗೆಟ್ ಮಾಡಿ ಬಿಜೆಪಿಯವರು ನನ್ನನ್ನು ಸೋಲಿಸಿದರು. ಬಿಜೆಪಿಯ ಇಂದಿನ ಪರಿಸ್ಥಿತಿಗೆ ಕೆಲವರ ದುರಹಂಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯ ಅನೇಕರಿಗೆ ದುರಹಂಕಾರ ಬಂದಿದೆ. ಅದಕ್ಕೆ ಬಿಜೆಪಿಗೆ ಈ ಗತಿ ಬಂದಿದೆ ಎಂದು ಹೇಳಿದರು.