alex Certify BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ. ಈ ನಡುವೆ ಶಾಸಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಿನ್ನೆ ರಾತ್ರಿ ದೆಹಲಿಯಿಂದ ಆಗಮಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಶಾಸಕರು ಭೇಟಿಯಾಗಿದ್ದಾರೆ. ಶಾಸಕರಾದ ರಾಮಣ್ಣ ಲಮಾಣಿ, ಮುದ್ನಾಳ್, ಸುರೇಶ್ ಕುಮಾರ್ ಸೇರಿದಂತೆ ಹಲವು ಶಾಸಕರು ಯಡಿಯೂರಪ್ಪ ಭೇಟಿಯಾಗಿ ಟಿಕೆಟ್ ವಿಚಾರವಾಗಿ ಮನವಿ ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...