ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳ ಬಗ್ಗೆ ತನಿಖೆಯಾಗಲೇಬೇಕು ಎಂದು ಶಾಸಕ ಬಸವರಾಜ್ ರಾಯರೆಡ್ಡಿ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾದಿದ ರಾಯರೆಡ್ಡಿ, ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ತನಿಖೆಯಾಗಲಿ. ಅಧಿಕಾರಿಗಳು, ಸಚಿವರ ವಿರುದ್ಧ ಸೂಕ್ತ ತನಿಖೆ ನಡೆಸಿ ಶಿಕ್ಷೆಯಾಗಲಿ ಎಂದರು.
ಈ ನಿಟ್ಟಿನಲ್ಲಿ ತನಿಖಾ ಆಯೋಗ ರಚನೆ ಮಾಡುವಂತೆ ನಾನು ಒತ್ತಾಯಿಸಿದ್ದೇನೆ. ಆದಷ್ಟು ಬೇಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.