ಬೆಂಗಳೂರು: ರಾಜ್ಯ ಸರ್ಕಾರದ ಮಂತ್ರಿ ಮಂಡಲದ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ. ವಿಜಯೋತ್ಸವಗಳು, ಸನ್ಮಾನಗಳು ಮಾತ್ರ ಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ತನ್ನ ಇಮೇಜ್ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಹೊಸಬರಂತೆ ಪ್ರಮಾಣವಚನ ಸ್ವೀಕರಿಸಿರುವ ಹಳೆ ಸಚಿವರು ಹಳೇ ಚಾಳಿ ಮುಂದುವರೆಸಿದ್ದಾರೆ. ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದಿದ್ದಾರೆ.
BIG NEWS: ಮೂರನೇ ಅಲೆ ತಡೆಗೆ ಮತ್ತೆ ಕಠಿಣ ನಿಯಮ ಜಾರಿ ಸಾಧ್ಯತೆ
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಚಾಟಿ ಬೀಸಿದ್ದಾರೆ.