ಬೆಂಗಳೂರು: ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಮಿತ್ ಶಾ ಆಗಮನದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿನ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಎಲ್ಲಾ ಶಾಸಕರು, ಸಚಿವರಿಗೂ ಪಕ್ಷದ ಕಚೇರಿಯಿಂದಲೆ ಬೆಂಗಳೂರಿಗೆ ಆಗಮಿಸಲು ಬುಲಾವ್ ನೀಡಲಾಗಿದೆ.
ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಲ್ಲಿರುವ ನಡುವೆಯೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ನಾಳೆ ಬಿಜೆಪಿ ಅನೌಪಚಾರಿಕ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಲಂಡನ್ ನಲ್ಲೂ ನಡೆಯಲಿದೆ ʼಹನುಮಾನ್ ಚಾಲೀಸʼ ಪಠಣ
ನಾಳೆ ಬಸವಜಯಂತಿ ಹಿನ್ನೆಲೆಯಲ್ಲಿ ಅಮಿತ್ ಶಾ ಚಾಲುಕ್ಯ ವೃತ್ತದಲ್ಲಿ ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಭೋಜನಕೂಟ ಏರ್ಪಡಿಸಲಾಗಿದ್ದು, ಭೋಜನ ಕೂಟಕ್ಕೆ ಸಚಿವರು, ಶಾಸಕರಿಗೂ ಆಹ್ವಾನಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಅಮಿತ್ ಶಾ ಆಗಮನದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಗಳು ನಡೆಯುವ ನಿರೀಕ್ಷೆ ಇದ್ದು, ಪ್ರಮುಖವಾಗಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗಲಿದೆಯೇ? ಎಂಬುದನ್ನು ಕಾದು ನೋಡಬೇಕಿದೆ.