alex Certify BIG NEWS: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಹಿನ್ನೆಲೆ; ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಹಿನ್ನೆಲೆ; ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆ ಪಿ ಎಸ್ ಐ ಹಾಗೂ ಸುಬ್ರಹ್ಮಣ್ಯ ಪಿ ಸಿ ಗಳನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಳ ಸೂಚನೆ ಮಾಡದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ನೀಡಲು ಸೂಚಿಸಲಾಗಿದೆ.

ಬೆಳ್ಳಾರೆಗೆ ಕುಂದಾಪುರ ಎಸ್ ಐ ಆಗಿದ್ದ ಸುಹಾನ್ ಅವರನ್ನು ನೇಮಕ ಮಾಡಲಾಗಿದ್ದು, ಸುಬ್ರಹ್ಮಣ್ಯ ಠಾಣೆಗೆ ವಿಟ್ಲ ಠಾಣೆಯ ಮಂಜುನಾಥ್ ಅವರನ್ನು ಪಿ ಎಸ್ ಐ ಆಗಿ ನೇಮಕ ಮಾಡಲಾಗಿದೆ. ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಪೊಲಿಸರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...