ಹುಬ್ಬಳ್ಳಿ: ಪಕ್ಷ ಸಂಘಟನೆ, ವಿಧಾನಸಭಾ ಚುನಾವಣಾ ತಯಾರಿ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆ ಚರ್ಚೆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಚಾಲನೆ ದೊರೆತಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಗೋಪೂಜೆ ಮಾಡಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕಾರಿಣಿಗೆ ಚಾಲನೆ ನೀಡಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಸೋಲು, ಪಂಚಾಯತ್ ಚುನಾವಣೆ, ವಿಧಾನಸಭಾ ಚುನಾವಣೆಗೆ ತಯಾರಿ, ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳು ಕಾರ್ಯಕಾರ್ಣಿಯಲ್ಲಿ ಚರ್ಚೆಗೆ ಬರಲಿದೆ.
BIG NEWS: 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಪಡೆಯಲು ಬೇಕಿಲ್ಲ ಕೊಮಿರ್ಬಿಡಿಟಿ ದಾಖಲೆ; ಕೇಂದ್ರದಿಂದ ಮಹತ್ವದ ಘೋಷಣೆ
ಕಾರ್ಯಕಾರಿಣಿ ಸಭೆಗೂ ಮುನ್ನ ಮಾತನಾಡಿದ ಸಿಎಂ ಬೊಮ್ಮಾಯಿ, ಕಾರ್ಯಕಾರಿಣಿ ಅಜೆಂಡಾ ಬಗ್ಗೆ ಪಕ್ಷವೇ ಹೇಳುತ್ತೆ. ಸಂಪುಟ ವಿಸ್ತರಣೆ ಬಗ್ಗೆಯೂ ನಾನು ಏನೂ ಪ್ರತಿಕ್ರಿಯೆ ನೀಡಲ್ಲ. ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ಎಲ್ಲಾ ವರಿಷ್ಠರೂ ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಸಾಮೂಹಿಕವಾಗಿ ಮುಂಬರುವ ಚುನಾವಣೆಯನ್ನು ಎದುರಿಸುತ್ತೇವೆ. ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದಿದ್ದಾರೆ.
ಇನ್ನು ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಕಾರ್ಯಕಾರಿಣಿಗೆ ಗೈರಾಗಿದ್ದಾರೆ. ಬೆಳಗಾವಿ ಸೋಲಿನ ಪರಾಮರ್ಶೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಾರಕಿಹೊಳಿ ಸಹೋದರರು ಕಾರ್ಯಕಾರಿಣಿಗೆ ಗೈರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ರಮೇಶ್ ಜಾರಕಿಹೊಳಿ ದೆಹಲಿಗೆ ದೌಡಾಯಿಸಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.