ಬೆಂಗಳೂರು: ಗುಜರಾತ್ ಕೋರ್ಟ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅರ್ಜಿ ವಜಾಗೊಂಡಿದೆ. ಇದು ಬಿಜೆಪಿ ಕುತಂತ್ರವಾಗಿದ್ದು, ಬಿಜೆಪಿ ಕುತಂತ್ರವನ್ನು ನಾವು ಖಂಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಗೆ ಸಂಬಂಧಿಸಿದಂತೆ ಗುಜರಾತ್ ನ ಸೂರತ್ ಕೋರ್ಟ್ ವಿಧಿಸಿದ್ದ 2 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಕುತಂತ್ರವನ್ನು ನಾವು ಖಂಡಿಸುತ್ತೇವೆ. ನಾವು ರಾಹುಲ್ ಗಾಂಧಿ ಪರ ನಿಲ್ಲುತ್ತೇವೆ ಎಂದರು.
ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಬಿಜೆಪಿ ಕುತಂತ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.