ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿ ರಚನೆ ಮಾಡಿದ್ದು, ಹಲವು ನಾಯಕರಿಗೆ ಜವಾಬ್ದಾರಿ ಹಂಚಿಕೆ ಮಾಡಿದೆ.
ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇಮಕಗೊಂಡಿದ್ದಾರೆ. ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ 25 ನಾಯಕರಿಗೆ ಸ್ಥಾನ ನೀಡಲಾಗಿದೆ. ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲಾದವರಿಗೆ ಸ್ಥಾನ ನೀಡಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರಿಗೆ ಸ್ಥಾನ ನೀಡಲಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಹಲವರಿಗೆ ಸ್ಥಾನ ನೀಡಲಾಗಿದೆ.