alex Certify BIG NEWS: ಬಿಜೆಪಿ ‘ಜನೋತ್ಸವಕ್ಕೆ’ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ‘ಜನೋತ್ಸವಕ್ಕೆ’ ಡೇಟ್ ಫಿಕ್ಸ್

ವಿವಿಧ ಕಾರಣಗಳಿಗಾಗಿ ಎರಡು ಬಾರಿ ಮುಂದೂಡಿಕೆಯಾಗಿದ್ದ ಬಿಜೆಪಿ ಜನೋತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಸಮಾವೇಶದಲ್ಲಿ ಎರಡರಿಂದ ಮೂರು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ.

ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಬೇಕಾಗಿತ್ತಾದರೂ ಆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕಾರಣಕ್ಕೆ ಮುಂದೂಡಿಕೆಯಾಗಿತ್ತು.

ಬಳಿಕ ಅಗಸ್ಟ್ 28ರಂದು ಜನೋತ್ಸವಕ್ಕೆ ದಿನಾಂಕ ನಿಗದಿಯಾಗಿತ್ತಾದರೂ ಆ ಸಂದರ್ಭದಲ್ಲಿ ಗೌರಿ – ಗಣೇಶ ಹಬ್ಬ ಸಮೀಪದಲ್ಲಿರುವುದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮತ್ತೊಮ್ಮೆ ಮುಂದೂಡಿಕೆಯಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...