ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಜನೋತ್ಸವ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ.
ಆಗಸ್ಟ್ 28ರಂದು ನಿಗದಿಯಾಗಿದ್ದ ಜನೋತ್ಸವ ಸಮಾವೇಶ ಸೆಪ್ಟೆಂಬರ್ 11ರಂದು ನಿಗದಿ ಮಾಡಲಾಗಿದೆ. ಬಿಜೆಪಿ ವರಿಷ್ಠರ ಸಮಯಗಳಿಗೆ ಅನುಗುಣವಾಗಿ ಸಮಾವೇಶದ ಸಮಯ ನಿಗದಿ ಪಡಿಸಲಾಗಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕಾರಣದಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿ ಜನೋತ್ಸಾಹ ಸಮೇಶವನ್ನು ಆ.28ಕ್ಕೆ ನಿಗದಿ ಪಡಿಸಲಾಗಿತ್ತು. ಇದೀಗ ಆ.28ರ ಬದಲಾಗಿ ಸೆಪ್ಟೆಂಬರ್ 11ರಂದು ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಸಲು ಸಿಎಂ ಬಸವರಾಜ್ ಬೊಮ್ಮಾಯಿ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ನಡೆಸುತ್ತಿರುವ ಈ ಸಮಾವೇಶ ಮಹತ್ವ ಪಡೆದುಕೊಂಡಿದೆ.