alex Certify BIG NEWS: ಬಿಜೆಪಿ-ಜೆಡಿಎಸ್ ಒಳ ಒಪ್ಪಂದವಾಗಿದೆ; 1 ಲಕ್ಷ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಬೇಕು ಎಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ-ಜೆಡಿಎಸ್ ಒಳ ಒಪ್ಪಂದವಾಗಿದೆ; 1 ಲಕ್ಷ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಬೇಕು ಎಂದ ಸಿದ್ದರಾಮಯ್ಯ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವರುಣಾ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ, ಸಮಾವೇಶ ನಡೆಸಿದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ವರುಣಾದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ. ನನ್ನನ್ನು ಸೋಲಿಸಲು ಕ್ಷೇತ್ರದಲ್ಲಿ ಹಣದ ಹೊಳೆ ಹರಿಸಿವೆ. ನನ್ನ ವಿರುದ್ಧ ಕುತಂತ್ರ ನಡೆಸುತ್ತಿದ್ದಾರೆ. ಅದೇನೇ ಮಾಡಿದರೂ ವರುಣಾದಲ್ಲಿ ನಾನು ಗೆಲ್ಲುವುದು ಖಚಿತ. 1 ಲಕ್ಷ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಈಗಾಗಲೆ ನಾವು ನಾಲ್ಕು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ ಎಂದರು. ವಸತಿ ಸಚಿವ ವಿ.ಸೋಮಣ್ಣ ನನ್ನ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದಾರೆ. ನಾನು ಈ ಕ್ಷೇತ್ರದಲಿ ಹುಟ್ಟಿ ಬೆಳೆದವನು. ಸೋಮಣ್ಣ ಈ ಕ್ಷೇತ್ರದವರೇ ಅಲ್ಲ, ವಸತಿ ಸಚಿವರಾಗಿ ವರುಣಾ ಕ್ಷೇತ್ರದಲ್ಲಿ ಒಂದೇ ಒಂದು ಮನೆಯನ್ನೂ ಕಟ್ಟಿಸಿಕೊಟ್ಟಿಲ್ಲ. ವರುಣಾದ ಮಗನಾಗಿ ನಾನು ಈ ಕ್ಷೇತ್ರದ ಜನರಿಗಾಗಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಈಗ ವರುಣಾಗೆ ಬಂದು ವಿ.ಸೋಮಣ್ಣ ಸ್ಪರ್ಧಿಸಿದ್ದಾರೆ. ಇಲ್ಲಿನ ಜನರು ಅವರಿಗೆ ಮತ ಕೊಡುವುದಿಲ್ಲ. ಬಿಜೆಪಿ, ಜೆಡಿಎಸ್ ನ ಯಾವ ಆಮಿಷಕ್ಕೂ  ಕ್ಷೇತ್ರದ ಜನ ಸೊಪ್ಪು ಹಾಕಲ್ಲ ಎಂದು ಹೇಳಿದರು.

ಸಮಾವೇಶದ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ನಂಜನಗೂಡು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...