ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ ಇದಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ, ಅಭಿವೃದ್ಧಿ ಶೂನ್ಯ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಜನ ಬಿಜೆಪಿ ವಿರುದ್ಧವಾಗಿದ್ದಾರೆ. ಕಾಂಗ್ರೆಸ್ ಪರ ನಿಂತಿದ್ದಾರೆ ಎಂದರು.
ಸಿಎಂ ತವರು ಜಿಲ್ಲೆಯಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗುಲುವು ಪಕ್ಕಾ ಆಗಿದೆ. 100ಕ್ಕೆ 100ರಷ್ಟು ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು.