ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 28ರಂದು ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಲಾಗಿದೆ.
ಗೌರಿ – ಗಣೇಶ ಹಬ್ಬ ಈ ದಿನದ ಆಸುಪಾಸಿನಲ್ಲಿರುವ ಕಾರಣ ಪಕ್ಷದ ನಾಯಕರು, ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುವುದು ಕಷ್ಟವಾಗಬಹುದೆಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ಮೊದಲು ಜುಲೈ 28ರಂದು ‘ಜನೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತಾದರೂ ಆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದ ಕಾರಣ ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು ಹೀಗಾಗಿ ಜನೋತ್ಸವವನ್ನು ಆಗಸ್ಟ್ 28ಕ್ಕೆ ಮುಂದೂಡಲಾಗಿತ್ತು.