
ಕಲಬುರ್ಗಿ: ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ನಿನ್ನೆ ನಡೆದ ರಾಜ್ಯ ಬಿಜೆಪಿ ನಾಯಕರ ಸಭೆಗೂ ಆಹ್ವಾನ ನೀಡದಿರುವುದು ಇನ್ನಷ್ಟು ಪುಷ್ಠಿ ನೀಡುವಂತಿತ್ತು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮಾತ್ರ ಈ ಆರೋಪ ನಿರಾಕರಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ. ನಿನ್ನೆ ಬೇರೆ ಸಭೆಗೆ ಹೋಗಿದ್ದರಿಂದಾಗಿ ಬಿಜೆಪಿ ಸಭೆಗೆ ಹೋಗಲು ಆಗಿಲ್ಲ. ನಿನ್ನೆ ಬಿಜೆಪಿ ಸಭೆಯಲ್ಲಿ ಭಾಗಿಯಾಗದೇ ಇರುವುದಕ್ಕೆ ವಿಶೇಷ ಕಾರಣವೇನೂ ಇಲ್ಲ ಎಂದು ಹೇಳಿದರು.
ಬಿಜೆಪಿ ನನಗೆ ಎಲ್ಲಾ ಸ್ಥಾನಮಾನ ಕೊಟ್ಟಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನಾಯಕರು ನನ್ನನ್ನು ಗೌರವಯುತವಾಗಿ ಕಾಣುತ್ತಿದ್ದಾರೆ. ಬಿಜೆಪಿ ನಾಯಕರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.