alex Certify BIG NEWS: ಬಿಜೆಪಿ ನಾಯಕರಿಗೆ ಋಣಿಯಾಗಿದ್ದೇನೆ ಎಂದ ಬಿ.ಎಸ್.ವೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ನಾಯಕರಿಗೆ ಋಣಿಯಾಗಿದ್ದೇನೆ ಎಂದ ಬಿ.ಎಸ್.ವೈ

ಕಲಬುರ್ಗಿ: ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ನಿನ್ನೆ ನಡೆದ ರಾಜ್ಯ ಬಿಜೆಪಿ ನಾಯಕರ ಸಭೆಗೂ ಆಹ್ವಾನ ನೀಡದಿರುವುದು ಇನ್ನಷ್ಟು ಪುಷ್ಠಿ ನೀಡುವಂತಿತ್ತು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮಾತ್ರ ಈ ಆರೋಪ ನಿರಾಕರಿಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ. ನಿನ್ನೆ ಬೇರೆ ಸಭೆಗೆ ಹೋಗಿದ್ದರಿಂದಾಗಿ ಬಿಜೆಪಿ ಸಭೆಗೆ ಹೋಗಲು ಆಗಿಲ್ಲ. ನಿನ್ನೆ ಬಿಜೆಪಿ ಸಭೆಯಲ್ಲಿ ಭಾಗಿಯಾಗದೇ ಇರುವುದಕ್ಕೆ ವಿಶೇಷ ಕಾರಣವೇನೂ ಇಲ್ಲ ಎಂದು ಹೇಳಿದರು.

ಬಿಜೆಪಿ ನನಗೆ ಎಲ್ಲಾ ಸ್ಥಾನಮಾನ ಕೊಟ್ಟಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನಾಯಕರು ನನ್ನನ್ನು ಗೌರವಯುತವಾಗಿ ಕಾಣುತ್ತಿದ್ದಾರೆ. ಬಿಜೆಪಿ ನಾಯಕರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...