ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ದಾವಣಗೆರೆ ಭೇಟಿ ಬೆನ್ನಲ್ಲೇ ಶಿವಮೊಗ್ಗ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಶಿವಮೊಗ್ಗ ನಗರ ಟಿಕೆಟ್ ಬಿಜೆಪಿ ನಾಯಕರಿಗೆ ಕಗ್ಗಂಟಾಗಿದೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರ ಟಿಕೆಟ್ ತನ್ನ ಪುತ್ರ ಕೆ.ಇ.ಕಾಂತೇಶ್ ಗೆ ನೀಡಲು ಲಾಬಿ ನಡೆಸಿದ್ದಾರೆ. ಇದರಿಂದ ಆಯನೂರು ಮಂಜುನಾಥ್ ಈಶ್ವರಪ್ಪ ವಿರುದ್ಧ ತಿರುಗಿಬಿದ್ದಿದ್ದು, ತಮಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಟಿಕೆಟ್ ಗಾಗಿ ಪ್ರಬಲ ಪೈಪೋಟಿ ನಡೆಸಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತರೂ ಕೂಡ ಟಿಕೆಟ್ ರೇಸ್ ನಲ್ಲಿದ್ದಾರೆ. ಜ್ಯೋತಿಪ್ರಕಾಶ್, ಡಾ.ಧನಂಜಯ ಸರ್ಜಿ ಕೂಡ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಮಾಜಿ ಸಚಿವ ಈಶ್ವರಪ್ಪನವರಿಗೆ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದೆ.