ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ. ರವಿ ಮಾಂಸ ಸೇವಿಸಿ ದೇವಸ್ಥಾನಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ 2 ನಾಲಿಗೆ ಅನ್ನೋದಕ್ಕೆ ಇದು ಉದಾಹರಣೆ. ಈ ಹಿಂದೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮುಗಿ ಬಿದ್ದಿದ್ದರು. ಸಿ.ಟಿ. ರವಿ ಕೂಡ ವಾಗ್ದಾಳಿ ನಡೆಸಿದ್ದರು. ಈಗ ಸಿ.ಟಿ. ರವಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆದರೂ ಬಿಜೆಪಿ ನಾಯಕರು ಸುಮ್ಮನಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಮೊದಲು ನಾನು ಮಾಂಸ ತಿಂದಿಲ್ಲ, ದೇವಸ್ಥಾನಕ್ಕೆ ಹೋಗಿದ್ದೇನೆ ಎಂದಿದ್ದರು. ಒಂದು ವೇಳೆ ತಿಂದಿದ್ರೂ ನೀವ್ಯಾರು ಕೇಳೋಕೆ ಅಂದಿದ್ದರು. ಸಿ.ಟಿ. ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ. ಬೇರೆಯವರು ಮಾಡಿದರೆ ಹಿಂದೂ ಧರ್ಮದ ವಿರೋಧಿ ಅಂತಾರೆ. ಅವರಿಗೊಂದು ನ್ಯಾಯ ಇವರಿಗೊಂದು ನ್ಯಾಯಾನಾ? ಎಂದು ಪ್ರಶ್ನಿಸಿದ್ದಾರೆ.