alex Certify BIG NEWS: ಬಿಜೆಪಿ ನಾಯಕರ ಅಸಮಾಧಾನಕ್ಕೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ನಾಯಕರ ಅಸಮಾಧಾನಕ್ಕೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ವರುಣಾದಲ್ಲಿ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಸ್ವತಃ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಸಚಿವ ವಿ. ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಇಬ್ಬರೂ ನನಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ನನಗೆ ಗೌರವವಿದೆ. ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಸಿದ್ದರಾಮಯ್ಯ ಎದುರಾಳಿ ಯಾರು ಎಂಬುದನ್ನೇ ನಾನು ಈವರೆಗೆ ಕೇಳಿಲ್ಲ ಎಂದಿದ್ದಾರೆ.

ವಿ. ಸೋಮಣ್ಣ ಕರೆದರೆ ಅವರ ಪರವೂ ಪ್ರಚಾರ ಮಾಡುತ್ತೇನೆ. ಬಿಜೆಪಿ ನಾಯಕರಾರೂ ನನ್ನನ್ನು ಸಂಪರ್ಕಿಸಿಲ್ಲ. ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...