alex Certify BIG NEWS: ಬಿಜೆಪಿ ನಾಯಕರ ಚೆಲ್ಲಾಟ; ಜನರಿಗೆ ಪ್ರಾಣ ಸಂಕಟ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ನಾಯಕರ ಚೆಲ್ಲಾಟ; ಜನರಿಗೆ ಪ್ರಾಣ ಸಂಕಟ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಶಾಸಕರ ಸಹಿ ಸಂಗ್ರಹ ವಿಚಾರವಾಗಿ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಹಿ ಸಂಗ್ರಹಿಸಿದ್ದರೆ ಆ ಶಾಸಕರ ಪಟ್ಟಿ ಬಿಡುಗಡೆ ಮಾಡಲಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಜನರು ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಸಿಕೆ ಸಿಗದೇ ಪರದಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಸರ್ಕಾರದಲ್ಲಿರುವ ಶಾಸಕರು, ಸಚಿವರು, ಅಧಿಕಾರಕ್ಕಾಗಿ ಕಿತ್ತಾಡುತ್ತಿರುವುದಲ್ಲದೇ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಚೆಲ್ಲಾಟ, ಜನರಿಗೆ ಪ್ರಾಣ ಸಂಕಟ ಎಂಬಂತಾಗಿದೆ ರಾಜ್ಯದ ಸ್ಥಿತಿ. ಇವರಿಗೆ ಮಾನ ಮರ್ಯಾದೆ ಇದ್ದರೆ ಸರ್ಕಾರ ನಡೆಸಲಿ. ಇಲ್ಲವಾದರೆ ಮನೆಗೆ ತೆರಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಪರವಾಗಿ 65 ಶಾಸಕರ ಸಹಿ ಸಂಗ್ರಹ ಮಾಡಿದ್ದಾರಂತೆ. ಶಾಸಕರ ಸಹಿ ಸಂಗ್ರಹಿಸಿದ್ದರೆ ಅವರ ಪಟ್ಟಿ ಬಿಡುಗಡೆ ಮಾಡಲಿ. ಬಿಜೆಪಿ ನಾಯಕರು ರಾಜ್ಯದ ಜನರಿಗೆ ಬೂದಿ ನೀಡುತ್ತಿದ್ದಾರೆ. ಇಂತಹ ಆಡಳಿತ ನಡೆಸುವ ಬದಲು ರಾಜೀನಾಮೆ ನೀಡಿ ಕೆಳಗಿಳಿಯಲಿ ಎಂದು ಗುಡುಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...