BIG NEWS: ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಹಕಾರಿಯಾಗುವಂತ ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ತಜ್ಞರಿಂದ 900 ಸಲಹೆ ಪಡೆದು 170 ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹಿಸಿ ಬಿಜೆಪಿ ಚುನಾವಣ  ಪ್ರಣಾಳಿಕೆ ಸಿದ್ಧಪಡಿಸಿದ್ದು, ಭಗವದ್ಗೀತೆಯನ್ನು ಹೇಗೆ ನಾವು ಭಕ್ತಿಯಿಂದ ಕಾಣುತ್ತೇವೋ ಅದೇ ರೀತಿ ಶ್ರದ್ಧಾಪೂರ್ವಕವಾಗಿ ನೋಡುವಂತಹ ಜನಪರವಾದ ಪ್ರಣಾಳಿಕೆ ಇದಾಗಿದೆ ಎಂದರು.

ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಮೊದಲಾದವರು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read