ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಮಾತ್ರ ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಅತ್ತ ನವದೆಹಲಿಯಲ್ಲಿ ಸರಣಿ ಸಭೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಇತ್ತ ರಾಜ್ಯದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೂ ಸಿದ್ಧತೆ ನಡೆಸಲಾಗುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಸುಧಾಕರ್, ಬಿಜೆಪಿ ಚುನಾವಣಾ ಪ್ರಣಾಳಿಕೆ ಸಿದ್ಧ ಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ವಿಭಾಗ, ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಭೆ ನಡೆದಿದೆ ಎಂದರು.
ರಾಜ್ಯ ಹಾಗೂ ದೇಶಕ್ಕೆ ಬಿಜೆಪಿ ಪ್ರಣಾಳಿಕೆ ಮಾದರಿಯಾಗಲಿದೆ. ಹೊಸತನ, ಬದುಕು ಕಟ್ಟಿಕೊಡುವ ರೀತಿಯಲ್ಲಿ ಪ್ರಣಾಳಿಕೆ ಇರಲಿದೆ. ವಾರದೊಳಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.