ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶಿತರಾಗಿದ್ದು, ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮುಂದೆ ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ʼಬೇಕೇ ಬೇಕು ನ್ಯಾಯ ಬೇಕುʼ ಎಂಬ ಘೋಷಣೆಗಳನ್ನು ಕೂಗುತ್ತಿದ್ದ ಕಾರ್ಯಕರ್ತರು, ಹಿಂದೂಗಳ ಹತ್ಯೆ ನಡೆಯುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಏನು ಮಾಡುತ್ತಿದೆ ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ. ಆಗ ನಳೀನ್ ಕುಮಾರ್ ಕಟೀಲ್ ಮೌನಕ್ಕೆ ಶರಣಾಗಿದ್ದಾರೆ.
ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ನಳೀನ್ ಕುಮಾರ್ ಕಟೀಲ್ ಸ್ಥಳಕ್ಕೆ ಬಂದಿದ್ದು, ಮೌನವಾಗಿ ಕುಳಿತಿದ್ದಾರೆ. ಒಂದು ಹಂತದಲ್ಲಿ ಆಕ್ರೋಶಗೊಂಡಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಲ್ಲಿ ನಿಲ್ಲಿಸಿದ್ದ ನಳೀನ್ ಕುಮಾರ್ ಕಟೀಲ್ ಅವರ ಕಾರನ್ನು ಪಲ್ಟಿ ಮಾಡಲು ಮುಂದಾಗಿದ್ದಾರೆ. ಕೆಲವರ ಮಧ್ಯ ಪ್ರವೇಶದಿಂದಾಗಿ ಇದು ತಪ್ಪಿದೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಹಿಂದೂ ಕಾರ್ಯಕರ್ತರು ಟೈರ್ ಪಂಕ್ಚರ್ ಮಾಡಿದ್ದಾರೆ.