alex Certify BIG NEWS: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ; ಸಿಎಂ ಹೇಳಿದ್ದೇನು ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ; ಸಿಎಂ ಹೇಳಿದ್ದೇನು ?

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷರು ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದರು.

ನಳಿನ್ ಕುಮಾರ್ ಕಟೀಲ್ ಅವರು ಕಳೆದ ಮೂರು ವರ್ಷಗಳಿಂದ ಪಕ್ಷವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿದ್ದಾರೆ. ಸುಮಾರು 8- 10 ಬಾರಿ ರಾಜ್ಯವನ್ನು ಸುತ್ತಿದ್ದಾರೆ. ಬೂತ್ ಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಮುನ್ನ ಹಾಗೂ ನಂತರ ವಿಧಾನ ಪರಿಷತ್ ಚುನಾವಣೆ, ಉಪ ಚುನಾವಣೆ ಎಲ್ಲವನ್ನೂ ಸಮರ್ಥವಾಗಿ ಎದುರಿಸಿದ್ದಾರೆ. ಅವರ ನೇತೃತ್ವ ಪಕ್ಷಕ್ಕೆ ಇನ್ನಷ್ಟು ಬಲ ನೀಡಲಿದೆ. ಅವರ ನೇತೃತ್ವದಲ್ಲಿಯೇ ಮುಂದುವರೆಯುತ್ತಿದ್ದೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...