ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇದರಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರು, ಶಾಸಕರು ಸೇರಿದಂತೆ 800 ಮಂದಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗದ ವಿವಿಧೆಡೆ ಸಂತೋಷ್ ಪಾಟೀಲ್ ‘ಶ್ರದ್ಧಾಂಜಲಿ’ ಫ್ಲೆಕ್ಸ್
ಈಶ್ವರಪ್ಪನವರ ರಾಜೀನಾಮೆಯಿಂದ ತೆರವಾದ ಸ್ಥಾನವೂ ಸೇರಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಒಟ್ಟು ಐದು ಸಚಿವ ಸ್ಥಾನಗಳು ಖಾಲಿ ಇದ್ದು, ಇಂದಿನಿಂದ ಆರಂಭವಾಗಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಕುರಿತು ಮಾತನಾಡಿದ್ದಾರೆ.
ಸಂಪುಟ ವಿಸ್ತರಣೆಯ ಸುಳಿವು ಸಿಗುತ್ತಿದ್ದಂತೆ ಸಚಿವಾಕಾಂಕ್ಷಿಗಳ ನಿರೀಕ್ಷೆ ಗರಿಗೆದರಿದ್ದು, ತಮ್ಮ ತಮ್ಮ ನಾಯಕರ ಮೂಲಕ ಲಾಬಿ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವಾಕಾಂಕ್ಷಿಗಳ ಪೈಕಿ ಕೆಲವರು ಹಿರಿತನದ ಆಧಾರದ ಮೇಲೆ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರೆ, ಕಿರಿಯರು ತಮಗೂ ಒಂದು ಅವಕಾಶ ಕೊಡಿ ಎಂಬ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಕುರಿತು ಬಹುತೇಕ ಒಂದೆರಡು ದಿನಗಳಲ್ಲಿ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.