alex Certify BIG NEWS: ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ; ಸಚಿವ ಈಶ್ವರಪ್ಪ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ; ಸಚಿವ ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಇದೀಗ ಆಡಳಿತ ಹಾಗೂ ವಿಪಕ್ಷ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಹುಚ್ಚುನಾಯಿಯಂತೆ ಕೂಗುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸ್ವಾಮೀಜಿಗಳು ತಲೆ ಮೆಲೆ ಖಾವಿ ಬಟ್ಟೆ ಹಾಕ್ತಾರೆ ಅದನ್ನು ಪ್ರಶ್ನಿಸುತ್ತೀರಾ ಎಂದು ಕೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿಲ್ಲ. ಧೈರ್ಯ ಇದ್ದರೆ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸಲಿ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಿ ಹೋಗುತ್ತಾರೆ ಎಂದರು.

ಸಿದ್ದರಾಮಯ್ಯ ನೀಚ ಕೆಲಸಕ್ಕೆ ಕೈ ಹಾಕಿದ್ದಾರೆ. ಮಠಗಳನ್ನು ಒಡೆಯಲು ಹೊರಟಿದ್ದಾರೆ. ಚಿಕ್ಕ ಸ್ವಾಮೀಜಿ, ದೊಡ್ಡ ಸ್ವಾಮೀಜಿ ಎಂದು ಹೇಳುತ್ತಾರೆ. ಮಠಗಳ ಆಸ್ತಿ ನೋಡಿ ಹೇಳಿಕೆಗಳನ್ನು ಕೊಡುತ್ತಾರಾ ? ಹಿಜಾಬ್ ವಿಚಾರವಾಗಿ ಸ್ವಾಮೀಜಿಗಳ ಬಟ್ಟೆ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ ರಾಜಕೀಯ ತೆವಲು ತೀರಿಸಿಕೊಳ್ಳಲು ಇಂತಹ ಹೇಳಿಕೆ ನೀಡಿದ್ದಾರೆ. ತಕ್ಷಣ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ಪಡೆಯಲಿ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...