ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ಸರ್ಕಾರ ದಕ್ಷ ಹಾಗೂ ಪ್ರಾಮಾಣಿಕವಾಗಿದೆ ಎಂಬುದನ್ನು ತೋರಿಸುತ್ತಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಬಿಜೆಪಿ ಸರ್ಕಾರ ದಕ್ಷ ಹಾಗೂ ಪ್ರಾಮಾಣಿಕವಾಗಿರುವುದಕ್ಕೆ ಲೋಕಾಯುಕ್ತ ಪುನ: ಅಸ್ತಿತ್ವಕ್ಕೆ ಬಂದಿದೆ. ಬಿಜೆಪಿ ಶಾಸಕರ ಮನೆಗಳ ಮೇಲೂ ಅಧಿಕಾರಿಗಳ ದಾಳಿ ನಡೆಯುತ್ತಿದೆ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅನೇಕ ಭ್ರಷ್ಟ ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಿತ್ತು. ಮರಳು ದಂಧೆಯಲ್ಲಿ ರಾಜ್ಯ ಬೊಕ್ಕಸಕ್ಕೆ 8000 ಕೋಟಿ ನಷ್ಟವಾಗಿದೆ ಎಂದು ನ್ಯಾ.ಕೆಂಪಣ್ಣ ಅವರ ಆಯೋಗ ವರದಿ ನೀಡಿದೆ. ಅದನ್ನು ಕದ್ದವರು ಯಾರು? ಎಂದು ಪ್ರಶ್ನಿಸಿದರು.