
ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲಾಗಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಏಪ್ರಿಲ್ 11ರವರೆಗೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.