ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಾಷ್ಟ್ರಪತಿಗೆ ದೂರು ನೀಡಿದ್ದಾರೆ.
ವಿಜಯಪುರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಬ್ದುಲ್ ಹಮೀದ್ ಮುಶ್ರಫ್, ಯತ್ನಾಳ್ ವಿರುದ್ಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ಯತ್ನಾಳ್ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಯತ್ನಾಳ್ ಅಧ್ಯಕ್ಷರಾಗಿರುವ ಸಿದ್ಧಸಿರಿ ಸಂಸ್ಥೆಯ ಬ್ಯಾಂಕ್ ಸಿಬ್ಬಂದಿ, ಸಕ್ಕರೆ ಕಾರ್ಖಾನೆ ಸಿಬ್ಬಂದಿ ಹೆಸರಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ. ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಮುಶ್ರಫ್ ಒತ್ತಾಯಿಸಿದ್ದಾರೆ.