ಬೆಳಗಾವಿ: ಪಿಎಸ್ಐ ಹುದ್ದೆ ನೇಮಕಾತಿಗಾಗಿ 300 ಕೋಟಿ ಲೂಟಿ ಮಾಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಸಿ ಸಾಮಾನ್ಯ ಜನರ ಬದುಕು ದುಸ್ತರವಾಗುವಂತೆ ಮಾಡಿದ್ದಾರೆ. ಇಂತಹ ಬಿಜೆಪಿ ಸರ್ಕಾರವನ್ನು ಈ ದೇಶದಿಂದಲೇ ಕಿತ್ತೊಗೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯ ರಾಮದುರ್ಗದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರಕ್ಕೆ ಜನರ ಸಮಸ್ಯೆ ಕಾಣಿಸುತ್ತಿಲ್ಲ. ಕಣ್ಣು ಕಾಣಿಸಲ್ಲ, ಕಿವಿಯೂ ಕೇಳಲ್ಲ ಎಂಬಂತಾಗಿದೆ. ಇದು ಎಮ್ಮೆ ಚರ್ಮ ಅಲ್ಲ, ಘೇಂಡಾಮೃಗದ ಚರ್ಮದ ಸರ್ಕಾರ ಎಂದು ಹಿಗ್ಗಾ ಮುಗ್ಗಾ ಕಿಡಿಕಾರಿದ್ದಾರೆ.
BIG BREAKING: ಹಾಡ ಹಗಲೇ ಮಹಿಳೆ ಮೇಲೆ ಗುಂಡಿನ ದಾಳಿ; ಕೃತ್ಯದ ಬಳಿಕ ಎಸ್ಕೇಪ್ ಆದ ದುಷ್ಕರ್ಮಿಗಳು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೇಕಾರರ ಸಮಸ್ಯೆ ಬಗೆ ಹರಿಸುತ್ತೇವೆ. ಪ್ರವಾಹ ಪೀಡಿತ ಊರುಗಳನ್ನು ಶಿಫ್ಟ್ ಮಾಡಿ ಜನರು ಪ್ರವಾಹಕ್ಕೆ ತುತ್ತಾಗದಂತೆ ನೋಡಿಕೊಳ್ಳುತ್ತೇವೆ. ರಾಜ್ಯದಲ್ಲಿರುವ ಜನವಿರೋಧಿ ಸರ್ಕಾರ ತೊಲಗಿಸಿ ಕಾಂಗ್ರೆಸ್ ಅಧಿಕಾರಕ್ಕೆ ತಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದಾರೆ.