alex Certify BIG NEWS: ಬಿಜೆಪಿ ಸರ್ಕಾರ ಇರುವುದು 50 ದಿನ ಮಾತ್ರ; 136 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸರ್ಕಾರ ಇರುವುದು 50 ದಿನ ಮಾತ್ರ; 136 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರ್ಕಾರ ಇರುವುದು ಇನ್ನು 50 ದಿನಗಳು ಮಾತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆಶಿವಕುಮಾರ್, ಭ್ರಷ್ಟ ಬಿಜೆಪಿ ಸರ್ಕಾರ ಕೊನೆಯಾಗಲು ದಿನಗಣನೆ ಆರಂಭವಾಗಿದೆ. ಇನ್ನು 50 ದಿನಗಳ ಬಳಿಕ ಬಿಜೆಪಿ ಸರ್ಕಾರ ಇರುವುದಿಲ್ಲ ಎಂದು ಹೇಳಿದರು.

ಚುನಾವಣೆಯಲ್ಲಿ ಕಾಂಗ್ರೆಸ್ 160 ಸ್ಥಾನಗಳಲ್ಲಿ ಗೆಲ್ಲುವ ಸೂಚನೆಗಳು ಕಾಣುತ್ತಿವೆ. ನಮ್ಮ ಸರ್ವೆ ಪ್ರಕಾರ 136 ಸ್ಥಾನಗಳಲ್ಲಿ ಗೆಲ್ಲುವುದು ನಿಶ್ಚಿತ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಜನರಿಗೆ ಉತ್ತಮ ಆದಳಿತ ಕೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...