ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಅವರ ಪುತ್ರರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಗೃಹ ಸಚಿವರಿಗೆ ಧಮ್ ಇದ್ದರೆ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಹಿರಂಗ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಪುತ್ರರು ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಯಾರ ಮಕ್ಕಳಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಧಮ್ ಇದ್ದರೆ ಅಂತವರನ್ನು ಅರೆಸ್ಟ್ ಮಾಡಿ ತನಿಖೆ ನಡೆಸಲಿ ಎಂದು ಹೇಳಿದರು.
ಬರೋಬ್ಬರಿ 1 ವರ್ಷಗಳ ಬಳಿಕ ನಟಿ ರಿಯಾ ಚಕ್ರವರ್ತಿ ಬ್ಯಾಂಕ್ ಖಾತೆಗಳ ಮೇಲಿದ್ದ ಮುಟ್ಟುಗೋಲು ತೆರವು
ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರಿಗೆ ಪತ್ರ ಬರೆಯಲಾಗಿದೆ. ಪ್ರಕರಣದಲ್ಲಿ ಕಾಂಗ್ರೆಸ್ ಲೀಡರ್ ಮಕ್ಕಳಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾವ ಕಾಂಗ್ರೆಸ್ ಲೀಡರ್ ಮಗನಿದ್ದಾನೆ ಎಂಬುದನ್ನು ಧೈರ್ಯವಾಗಿ ಹೇಳಲಿ. ತಾಕತ್ತಿದ್ದರೆ ಬಿಟ್ ಕಾಯಿನ್ ಪ್ರಕರಣವನ್ನು ತನಿಖೆಗೆ ಒಳಪಡಿಸಲಿ ಆಗ ಗೊತ್ತಾಗುತ್ತೆ ಯಾವ ಪಕ್ಷದ ಲೀಡರ್ ಮಕ್ಕಳಿದ್ದಾರೆ? ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಎಂದು ವಾಗ್ದಾಳಿ ನಡೆಸಿದರು.