alex Certify BIG NEWS: ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿಟ್ ಕಾಯಿನ್ ನಂತಹ ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಮಾಂಸಾಹಾರ ಮುಕ್ತ ಮಾರಾಟಕ್ಕೆ ಬೀಳಲಿದೆ ಬ್ರೇಕ್​…!

ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬೊಮ್ಮಾಯಿ ಈಗಿನ ಮುಖ್ಯಮಂತ್ರಿಗಳು. ಈ ಹಂತದಲ್ಲಿ ಪ್ರಧಾನಿ ಮೋದಿ ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆ ಕೈಬಿಡಿ ಎಂದಾಗುವುದಿಲ್ಲವೇ? ಬಿಟ್ ಕಾಯಿನ್ ಹಗರಣದಲ್ಲಿ ಬೊಮ್ಮಾಯಿ ಭಾಗಿಯೋ ಇಲ್ಲವೋ ಗೊತ್ತಿಲ್ಲ ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾವು ಹೇಳುತ್ತಿರುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ ಎಂದು ಹೇಳಿ ನಮ್ಮ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಬೇಡಿ. ಕೇಂದ್ರ ಹಾಗೂ ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರವಿದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ ಯಾವ ಪಕ್ಷದವರು ಎಂಬುದನ್ನು ಆಮೇಲೆ ನೋಡೋಣ ಎಂದು ಸವಾಲು ಹಾಕಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...