ಬೆಂಗಳೂರು: ಬಿಟ್ ಕಾಯಿನ್ ಕೇಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬಿಜೆಪಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಈಶ್ವರಪ್ಪ, ಬಿಟ್ ಕಾಯಿನ್ ನಲ್ಲಿ ಬಿಜೆಪಿಯವರು ಭಾಗಿಯಾಗಿದ್ದಾರೆ ಎಂಬ ಪ್ರಿಯಾಂಕಾ ಖರ್ಗೆ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಪ್ರಕರಣದಲ್ಲಿ ಬಿಜೆಪಿಯವರಿದ್ದರೆ ಅವರ ಹೆಸರನ್ನು ಬಹಿರಂಗಪಡಿಸಲಿ. ಕಾಂಗ್ರೆಸ್ ನವರು ಪ್ರಾಮಾಣಿಕರಾಗಿದ್ದರೆ ಬಿಜೆಪಿ ನಾಯಕರ ಒಬ್ಬರ ಹೆಸರನ್ನಾದರೂ ಹೇಳಲಿ. ಹೇಳಿದರೆ ನಾನು ಕಾಂಗ್ರೆಸ್ ನವರನ್ನು ಶ್ಲಾಘಿಸುತ್ತೇನೆ ಎಂದರು.
ಭಾನುವಾರದಂದು ಅನ್ನದಾತರೊಂದಿಗೆ ಕಾಲ ಕಳೆಯಲಿದ್ದಾರೆ ನಟ ದರ್ಶನ್....!
ಬಿಟ್ ಕಾಯಿನ್ ಕೇಸ್ ನಲ್ಲಿ ಬಿಜೆಪಿಯವರೇ ಇದ್ದಾರೆ ನಮ್ಮ ಬಳಿ ದಾಖಲೆಗಳಿವೆ ಎಂದು ಕಾಂಗ್ರೆಸ್ ನಾಯಕರು ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಸಿಎಂ ಬೊಮ್ಮಾಯಿಯವರಿಗೆ ಕಂಟಕ ಇದ್ದರೆ ಅದನ್ನೂ ಬಹಿರಂಗಪಡಿಸಲಿ ಎಂದು ಹೇಳಿದರು.