ಬೆಂಗಳೂರು: ಪಡಿತರದಾರರಿಗೆ ನಿಡಲಾಗುತ್ತಿದ್ದ 10 ಕೆಜಿ ಉಚಿತ ಅಕ್ಕಿಯಲ್ಲಿ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.
ಮುಂದಿನ ತಿಂಗಳಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತಿದ್ದು, 6 ಕೆಜಿ ಅಕ್ಕಿ ವಿತರಿಸಲಾಗುತ್ತದೆ. ಕಳೆದ 2 ವರ್ಷಗಳಿಂದ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಅದರಲ್ಲಿ ಈಗ 4 ಕೆಜಿ ಅಕ್ಕಿ ಕಡಿಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ 2020-21ರ ಮೇ ತಿಂಗಳಿಂದ ಈವರೆಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿ ವಿತರಿಸುತ್ತಿತ್ತು. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ರಾಜ್ಯ ಸರ್ಕಾರವೂ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿ ವಿತರಿಸುತ್ತಿತ್ತು. ಈಗ ಹತ್ತು ಕೆಜಿ ಅಕ್ಕಿ ಬದಲಾಗಿ 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತಿದೆ.