ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ವೋಟರ್ ಐಡಿ ಅಕ್ರಮ ವಿವಾದ ತಾರಕಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರನ್ನೇ ವೋಟರ್ ಲಿಸ್ಟ್ ನಿಂದ ಡಿಲಿಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 6,69,652 ಮತದಾರರ ಹೆಸರು ಡಿಲಿಟ್ ಆಗಿದೆ. ವೋಟರ್ ಐಡಿ ಪರಿಷ್ಕರಣೆ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳೇ ಅಕ್ರಮವೆಸಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತ ಮಿತಿ ಮೀರಿದೆ. ಈ ಬಾರಿ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ಮತದಾರರ ಹಕ್ಕನ್ನೇ ಕಸಿದುಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.