ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಬಿರುಗಾಳಿ ಮಳೆಗೆ ಬೃಹತ್ ಮರಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ.
ಹೊನ್ನಾವರ ತಾಲೂಕಿನ ಕತ್ತಲೆಕಾವಿನ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರ ಉರುಳಿ ಬಿದ್ದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ.
ಜೆಸಿಬಿ ಮೂಲಕವಾಗಿ ಮರ ತೆರವು ಕಾರ್ಯಾಚರಣೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನಡುವೆ ರಸ್ತೆಯಲ್ಲಿ ಸಾಲು ಸಾಲು ವಾಹನಗಳು ನಿಂತಿವೆ. ಕರಾವಳಿ ಜಿಲೆಗಳಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.