ಪಾಟ್ನಾ: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯಗೊಂಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಆರ್ ಜೆಡಿ ನಾಯಕರೊಂದಿಗೆ ರಾಜ್ಯಪಾಲ ಚೌಹಾಣ್ ಅವರನ್ನು ಭೇಟಿಯಾದ ಜೆಡಿಯು ನಾಯಕ ನಿತೀಶ್ ಕುಮಾರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ನಿತೀಶ್ ಕುಮಾರ್, ನಾವು ಎನ್ ಡಿಎ ಮೈತ್ರಿಕೂಟ ತೊರೆದಿದ್ದೇವೆ. ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ್ದಾರೆ ಎಂದರು.
ಅಲ್ಲದೇ ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿರ್ಧರಿಸಿದ್ದೇವೆ. 160 ಶಾಸಕರ ಬೆಂಬಲದ ಪಟ್ಟಿ ರಾಜ್ಯಪಾಲರಿಗೆ ಸಲ್ಲಿಕೆ ಮಾಡಿದ್ದೇವೆ. ಈ ಮೂಲಕ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದೇವೆ. ಎಲ್ಲಾ ಶಾಸಕರು, ಸಂಸದರು ಎನ್ ಡಿಎ ಮೈತ್ರಿಕೂಟದಿಂದ ಹೊರಬರುವಂತೆ ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ತಿಳಿಸಿದರು.