ನವದೆಹಲಿ: ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿದ್ದಾರೆ.
ಎಚ್ಚರ..! ಅಕ್ಟೋಬರ್ ನಲ್ಲಿ ಉತ್ತುಂಗಕ್ಕೇರಲಿದೆ ಕೊರೊನಾ ಮೂರನೇ ಅಲೆ
ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ, ಇಂದು ಬಿ.ಎಲ್.ಸಂತೋಷ್ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ನೂತನ ಸಚಿವ ಸಂಪುಟ ರಚನೆ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಸಚಿವರ ಪಟ್ಟಿ ಫೈನಲ್ ಮಾಡುವ ನಿಟ್ಟಿನಲ್ಲಿ ಇಂದು ಸಂಜೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಬೊಮ್ಮಾಯಿ ಭೇಟಿಯಾಗಲಿದ್ದಾರೆ. ಒಟ್ಟಾರೆ ಸಂಪುಟ ರಚನೆಗೆ ಸಂಜೆಯೇ ಮುಹೂರ್ತ ನಿಗದಿಯಾಗಲಿದ್ದು, ಬೊಮ್ಮಾಯಿ ಕ್ಯಾಬಿನೆಟ್ ಗೆ ಯಾರೆಲ್ಲ ಸೇರಲಿದ್ದಾರೆ ಎಂಬುದು ಕುತೂಹಲದ ಪ್ರಶ್ನೆಯಾಗಿದೆ.