alex Certify BIG NEWS: ಬಿ.ಎಸ್.ವೈ, ಕಟೀಲ್, ಅರುಣ್ ಸಿಂಗ್ ನೇತೃತ್ವದಲ್ಲಿ ವಿವಿಧೆಡೆ ರಾಜ್ಯ ಪ್ರವಾಸ; ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ 6 ಕಡೆ ಬಿಜೆಪಿ ಬೃಹತ್ ರ್ಯಾಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್.ವೈ, ಕಟೀಲ್, ಅರುಣ್ ಸಿಂಗ್ ನೇತೃತ್ವದಲ್ಲಿ ವಿವಿಧೆಡೆ ರಾಜ್ಯ ಪ್ರವಾಸ; ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ 6 ಕಡೆ ಬಿಜೆಪಿ ಬೃಹತ್ ರ್ಯಾಲಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಆರು ಕಡೆ ಬೃಹತ್ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಅವರು ಪಕ್ಷದ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದೇವೆ. ಸೆಪ್ಟೆಂಬರ್ 2 ರಂದು ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಲಿದೆ. ಇನ್ನು ಸೆಪ್ಟೆಂಬರ್ 8 ರಂದು ದೊಡ್ಡ ಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿ ಮಾಡಲು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ ಎಂದರು.

ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾಗಿದೆ. ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...