alex Certify BIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ. 10 ಕೆಜಿ ಅಕ್ಕಿಯಲ್ಲಿ ಒಂದು ಗ್ರಾಂ ಕಡಿಮೆ ಆದರೂ ಧರಣಿ ನಡೆಸುತ್ತೇವೆ ಎಂದು ಹೇಳಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಅವರ ಪ್ರತಿಭಟನೆ ರಾಜಕೀಯ ಗಿಮಿಕ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಮಹದೇವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪನವರಿಗೆ ಧರಣಿ ಮಾಡುವ ಯಾವುದೆ ನೈತಿಕತೆ ಇಲ್ಲ, ಕಾರಣ ಯಡಿಯೂರಪ್ಪ ತಮ್ಮ ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸಿದ್ರಾ ? ಇಲ್ಲ, ಯಡಿಯೂರಪ್ಪ ಸರ್ಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸಿದ್ರಾ ? ಎಂದು ಪ್ರಶ್ನಿಸಿದ್ದಾರೆ.

ನಾವು ನಮ್ಮ ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಸಿದ್ಧರಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ. ಈ ಕುರಿತು ನಾವು ಈಗಾಗಲೇ ತೀರ್ಮಾನ ಮಾಡಿದ್ದೇವೆ. ಹೀಗಿರುವಾಗ ಯಡಿಯೂರಪ್ಪ ಪ್ರತಿಭಟನೆ ಮಾಡುವುದಾಗಿ ಹೇಳುತ್ತಿರುವುದು ರಾಜಕೀಯ ಗಿಮಿಕ್ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...