alex Certify BIG NEWS: ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ ವಿಜಯೇಂದ್ರ ಅವರೇ ಕೊಡಿಸಲಿ ಎಂದು ಹೇಳಿದ್ದಾರೆ.

ಬೆಂಗಳೂರಿನ ಶಕ್ತಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಎಂಬುದು ಸುಳ್ಳು ಆರೋಪ. ಬಿಜೆಪಿ ನಾಯಕರು ಸುಮ್ಮನೇ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ ಮೊದಲು ಬಿ.ವೈ. ವಿಜಯೇಂದ್ರ ಅವರ ಮಿಲ್ ನಲ್ಲಿ ಎಷ್ಟು ಅಕ್ಕಿ ಇದೆ ಅದನ್ನು ಕೊಡಲಿ ಎಂದು ಟಾಂಗ್ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...