ಬೀದರ್: ಭಾರಿ ಮಳೆಯ ನಡುವೆಯೇ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ ಭೂಕಂಪವಾಗಿದ್ದು, ಗ್ರಾಮದ ಜನರು ಆತಂಕಕ್ಕೀಡಾಗಿದ್ದಾರೆ.
ಹುಮ್ನಾಬಾದ್ ತಾಲೂಕಿನ ಹಿಲಾಲಪುರ, ವಡ್ಡನಕೇರ, ಸಕ್ಕರಗಂಜ್, ನಿಂಬೂರ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ.
ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪವಾಗಿದೆ. ಭೂಕಂಪ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ್ದಾರೆ.