
ನಿನ್ನೆ ಕನ್ನಯ್ಯ ಲಾಲ್ ಅಂತ್ಯಕ್ರಿಯೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದಾಗ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಕ್ಕಪಕ್ಕದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.
ಇದರ ಮಧ್ಯೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಾರ್ವಜನಿಕರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕನ್ನಯ್ಯ ಲಾಲ್ ಹತ್ಯೆ ಮಾಡಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದಿರುವ ಅವರು, ಅಪರಾಧಿಗಳು ಯಾವುದೇ ಧರ್ಮ ಅಥವಾ ಕೋಮಿಗೆ ಸೇರಿರಲಿ ಅವರುಗಳನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
https://twitter.com/ANI_MP_CG_RJ/status/1542350762294267908