alex Certify BIG NEWS: ಬೂದಿ ಮುಚ್ಚಿದ ಕೆಂಡದಂತಿದೆ ಉದಯ್ ಪುರ ಪರಿಸ್ಥಿತಿ; ಬಿಕೋ ಎನ್ನುತ್ತಿವೆ ಬೀದಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೂದಿ ಮುಚ್ಚಿದ ಕೆಂಡದಂತಿದೆ ಉದಯ್ ಪುರ ಪರಿಸ್ಥಿತಿ; ಬಿಕೋ ಎನ್ನುತ್ತಿವೆ ಬೀದಿಗಳು

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾದ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ನಿನ್ನೆ ಕನ್ನಯ್ಯ ಲಾಲ್ ಅಂತ್ಯಕ್ರಿಯೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದಾಗ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಕ್ಕಪಕ್ಕದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.

ಇದರ ಮಧ್ಯೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಾರ್ವಜನಿಕರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕನ್ನಯ್ಯ ಲಾಲ್ ಹತ್ಯೆ ಮಾಡಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದಿರುವ ಅವರು, ಅಪರಾಧಿಗಳು ಯಾವುದೇ ಧರ್ಮ ಅಥವಾ ಕೋಮಿಗೆ ಸೇರಿರಲಿ ಅವರುಗಳನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

— ANI MP/CG/Rajasthan (@ANI_MP_CG_RJ) June 30, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...