ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು.
ಹೆಚ್ ಎ ಎಲ್ ನಿಂದ ಪ್ರಧಾನಿ ಮೋದಿ ಅವರು ರಸ್ತೆ ಮಾರ್ಗವಾಗಿ ಶಾಸಕರ ಭವನಕ್ಕೆ ತೆರಳಲಿದ್ದು, ನಂತರ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.