alex Certify BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ, ರಾಜ್ಯಪಾಲರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ, ರಾಜ್ಯಪಾಲರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು.

ಹೆಚ್ ಎ ಎಲ್ ನಿಂದ ಪ್ರಧಾನಿ ಮೋದಿ ಅವರು ರಸ್ತೆ ಮಾರ್ಗವಾಗಿ ಶಾಸಕರ ಭವನಕ್ಕೆ ತೆರಳಲಿದ್ದು, ನಂತರ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...