alex Certify BIG NEWS: ಬೆಂಗಳೂರಿಗೆ ಆಗಮಿಸಿದ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢ; ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿಗೆ ಆಗಮಿಸಿದ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢ; ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಆತಂಕ

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೋವಿಡ್ ಆತಂಕ ಹೆಚ್ಚುತ್ತಿದೆ. ಚೀನಾದಿಂದ ಆಗಮಿಸಿರುವ ವ್ಯಕ್ತಿ ಸೇರಿದಂತೆ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ಡಿಸೆಂಬರ್ 24 ರ ಹೊತ್ತಿಗೆ, ಬೆಂಗಳೂರಿನ ಕೆಐಎಎಲ್‌ಗೆ ಆಗಮಿಸಿದ 2867 ಪ್ರಯಾಣಿಕರಿಗೆ ಕೋವಿಡ್ -19 ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ 12 ಜನರು ಧನಾತ್ಮಕವಾಗಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಕೊರೊನಾ ರೂಪಾಂತರಿ ಪತ್ತೆಹಚ್ಚಲು ಎಲ್ಲಾ 12 ಸೋಂಕಿತರ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿದ್ದು, BF.7 ವೈರಸ್ ಆತಂಕಕ್ಕೂ ಇಮ್ಮಡಿಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...