alex Certify BIG NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.

ಕಳೆದ ಎರಡು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬೀದಿ ಬದಿ ವ್ಯಾಪಾರಿಗಳು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ, ಗಿರಿನಗರ, ನಾಗರಬಾವಿ, ಶಾಂತಿನಗರ, ಕಲಾಸಿಪಾಳ್ಯ, ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಚಂದ್ರಾಲೇಔಟ್, ನಂದಿನಿ ಲೇಔಟ್, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಆರ್.ಟಿ. ನಗರ, ಮತ್ತಿಕೆರೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...